
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಅಂದರೆ ಇಂದಿನಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಕ್ಷೇತ್ರದ ಭಕ್ತಾದಿಗಳಿಂದ ಹಸಿರು ಕಾಣಿಕೆ ಸಮರ್ಪಣೆ ನಡೆಯಿತು.
ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕರಂಗಲ್ಲು ಹಾಗೂ ಐನೆಕಿದು ಸೇರಿದಂತೆ ಗ್ರಾಮದ ವಿವಿಧ ಭಾಗಗಳಿಂದ ಬಂದಂತಹ ಹಸಿರು ಕಾಣಿಕೆಯನ್ನು ಹರಿಹರ ಮುಖ್ಯ ಪೇಟೆಯಿಂದ ಭಜನೆ, ವಾದ್ಯ, ಗೊಂಬೆ ಕುಣಿತದೊಂದಿಗೆ ಮೆರವಣಿಗೆಯ ಮೂಲಕ ತಂದು ಶ್ರೀದೇವರಿಗೆ ಸಮರ್ಪಣೆ ಮಾಡಲಾಯಿತು. ಹಸಿರು ಕಾಣಿಕೆ ಮೆರವಣಿಗೆಗೆ ಹರಿಹರ ಮುಖ್ಯ ಪೇಟೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ರವರು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.(ವರದಿ : ಉಲ್ಲಾಸ್ ಕಜ್ಜೋಡಿ)