Ad Widget

ಸುಳ್ಯ: ನೂತನ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಫೆ. 24 ರಂದು ಪದಗ್ರಹಣ

. . . . . . . . .

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಫೆ.24 ರಂದು ಅ.2.30ಕ್ಕೆ ಲಯನ್ಸ್ ಸೇವಾ ಸರನದಲ್ಲಿ ನಡೆಯಲಿದೆ ಎಂದು ನೂತನ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪದಗ್ರಹಣ ಸಮಾರಂಭದಲ್ಲಿ

ಡಿಸಿಸಿ ಅಧ್ಯಕ್ಷ ಹರೀಶ್‌ ಕುಮಾ‌ರ್, ಮಾಜಿ ಸಚಿವ ರಮಾನಾಥ ರೈ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆ‌ರ್.ಪೂಜಾರಿ, ಸುಳ್ಯ ಕ್ಷೇತ್ರದ ಉಸ್ತುವಾರಿ ಮಮತಾ ಗಟ್ಟಿ ಸೇರಿದಂತೆ ಜಿಲ್ಲೆ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಳಮಟ್ಟದಿಂದ ಪಕ್ಷ ಸಂಘಟನೆ:

ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಬೆಳೆಸುವ, ಕಾರ್ಯಕರ್ತರ ಭಾವನೆಗೆ ತಕ್ಕಂತೆ ಪಕ್ಷವನ್ನು ಸಂಘಟಿಸುವ ಗುರಿ ಇದೆ ಎಂದು ಅವರು ಹೇಳಿದರು. ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು.

ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ಮಾಡುತ್ತೇವೆ, ಎಲ್ಲರ ಕೆಲಸವನ್ನೂ ಪ್ರಾಮಾಣಿಕವಾಗಿ ಮಾಡುತ್ತೇವೆ, ಮಾದರಿ ತಾಲೂಕು ಆಗಿ ರೂಪಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.ಮುಂದಿನ ದಿನಗಳಲ್ಲಿ ಸಾಲು ಸಾಲು ಚುನಾವಣೆಗಳು ಬರಲಿದ್ದು ಚುನಾವಣೆ ಎದುರಿಸಲು ಪಕ್ಷವನ್ನು ಸಜ್ಜುಗೊಳಿಸಲಾಗುವುದು. ಎಲ್ಲಾ ಚುನಾವಣೆಗಳಲ್ಲಿಯೂ ಉತ್ತಮ ಸ್ಪರ್ಧೆ ನೀಡುವುದರ ಜೊತೆಗೆ ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಲು ಪ್ರಯತ್ನಿಸಲಾಗುವುದು.

ಎಲ್ಲಾ ನಾಯಕರ, ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಲಾಗುವುದು.

ಸುಳ್ಯ ತಾಲೂಕಿನ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಅಭಿವೃದ್ಧಿ ಮಾಡುವ ಪ್ರಯತ್ನ ಮಾಡುತ್ತೇವೆ. ಇದಕ್ಕಾಗಿ ಸಚಿವರಗಳನ್ನು ಸಂಬಂಧಪಟ್ಟವರನ್ನು ಭೇಟಿ ಮಾಡಲಾಗುವುದು. ಜನರ ಪರವಾಗಿ, ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ನಿರಂತರ ಹೋರಾಟ ಮಾಡುತ್ತೇವೆ ಎಂದರು.

ಸಚಿವರ ಗಮನಕ್ಕೆ ತಂದು 110 ಕೆವಿ ವಿದ್ಯುತ್ ಲೈನ್‌ನ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿ ತುರ್ತಾಗಿ ಅನುಷ್ಠಾನ ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ರಾಧಾಕೃಷ್ಣ ಬೊಳ್ಳೂರು ಹೇಳಿದರು. ಪಯಸ್ವಿನಿ ನದಿಯಲ್ಲಿ ಜಲಚರಗಳ ಸಾವಿಗೆ ಕಾರಣವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯ ಭವಾನಿಶಂಕರ ಕಲ್ಮಡ್ಕ, ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಡಿಸಿಸಿ ಸದಸ್ಯನಂದರಾಜ ಸಂಕೇಶ್, ಕಾಂಗ್ರೆಸ್‌ ಎಸ್‌ಸಿ ಘಟಕದ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್, ನ.ಪಂ.ಸದಸ್ಯ ಧೀರಾ ಕ್ರಾಸ್ತಾ, ನಗರ ಕಾಂಗ್ರೆಸ್‌ ಅಧ್ಯಕ್ಷ ಶಶಿಧರ ಎಂ.ಜೆ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ತಾಲೂಕು ಅಧ್ಯಕ್ಷ ಜಯಪ್ರಕಾಶ್‌ ನೆಕ್ರಪ್ಪಾಡಿ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!