
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಇಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭ ಅವರನ್ನು ಸುಳ್ಯ ಪ್ರೆಸ್ ಕ್ಲಬ್ಬಿಗೆ ಆಹ್ವಾನಿಸಿದ ಮೇರೆಗೆ ಅವರು ಪ್ರೆಸ್ ಕ್ಲಬ್ಬಿಗೆ ಭೇಟಿ ನೀಡಿದರು. ಅಲ್ಲಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತಲ್ಲದೆ ಪ್ರೆಸ್ ಕ್ಲಬ್ಬಿನ ವತಿಯಿಂದ ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಸುಸಜ್ಜಿತ ಗ್ರಂಥಾಲಯ ರಚನೆಯ ಯೋಜನೆಗೆ ನೆರವು ನೀಡುವಂತೆ ವಿನಂತಿಸಿಕೊಂಡಾಗ, ಪ್ರಾಧಿಕಾರದಿಂದ 5 ಲಕ್ಷ ರೂ.ನೆರವು ನೀಡುವುದಾಗಿ ಸೋಮಣ್ಣ ಬೇವಿನಮರದ ಭರವಸೆ ನೀಡಿದರು.
ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಗಡಿನಾಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್, ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸಿದ್ದಿಕ್ ಕೊಕ್ಕೊ, ರಾಜು ಪಂಡಿತ್ ಮೊದಲಾದವರು ಉಪಸ್ಥಿತರಿದ್ದರು.