
ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಯಸ್.ಜಾನಕಿ ಯವರು ಇತ್ತೀಚೆಗೆ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು.
ಇವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತ್ ಸದಸ್ಯ ಹರೀಶ ಇಂಜಾಡಿಯವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಜಯರಾಮ ರಾವ್, ಯಜ್ಞೇಶ್ ಆಚಾರ್, ಮಹೇಶ್ ಮತ್ತಿತರರು ಜತೆಗಿದ್ದರು.