
ದೇವಚಳ್ಳ ಗ್ರಾಮದ ತಳೂರು ಪೂಜಾರಿಮನೆ ಟಿ. ಪಿ. ಚಂದ್ರಶೇಖರ (ಪುಟ್ಟ) ಎಂಬವರು ಫೆ.21 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು.
ಚಂದ್ರಶೇಖರ ರವರು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣ ಮನೆಯವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋದರು. ಅಲ್ಲಿಯೂ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.