Ad Widget

ಫೆ.24 ರಂದು ಉದ್ಯೋಗ ಮೇಳ

. . . . . . . . .

ಮಡಿಕೇರಿ : ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್ ಕುಶಾಲನಗರ, ಪೆಂಟಾಟೆಕ್ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!