
ಸುಳ್ಯ ರೈತ ಉತ್ಪಾದಕರ ಕಂಪನಿ ವತಿಯಿಂದ ಕಾಫಿ ಮಂಡಳಿ ಕೊಡಗು ತೋಟಗಾರಿಕೆ ಇಲಾಖೆ ಸುಳ್ಯ ಗ್ರಾಮ ಪಂಚಾಯತ್ ಸಂಪಾಜೆ ದ. ಕ .ಜಂಟಿ ಆಶ್ರಯದಲ್ಲಿ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು. ಮಾಜಿ ಅಧ್ಯಕ್ಷರಾದ ಜಗದೀಶ್ ಕೆ. ಪಿ. ಸರ್ವರನ್ನು ಸ್ವಾಗತಿಸಿದರು ಕಾರ್ಯಕ್ರಮದಲ್ಲಿ ವೀರಪ್ಪ ಗೌಡ , ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಕಾಫಿ ಮಂಡಳಿಯ ಮುಖ್ಯಸ್ಥರು ಉಪಸ್ಥಿತರಿದ್ದರು, ಕೃಷಿ ಸಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.