- Thursday
- February 27th, 2025

ಅಂಗನವಾಡಿ ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಯೋಜನೆ ಅನುಷ್ಠಾನದಲ್ಲಿ ಮಹಿಳೆಯರು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಫೆ. 24ರಂದು ನಡೆಯಿತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸರ್ಕಾರದ...

ಅರಂಬೂರು ನಿವಾಸಿ ವೆಂಕಟೇಶ್ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ವಿಷಯ ಗೊತ್ತಾಗಿ ತಕ್ಷಣ ಇವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ.

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನದೊಂದಿಗೆ ವಾರ ಪೂರೈಸಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಫೆ.28ರಂದು ಸಂಜೆ 4.15...