
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯು ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಸ್ತುವಾರಿ ಪ್ರಾಂಶುಪಾಲ ಡಾ.ದಿನೇಶ್ ಕೆ ಅವರು ಜಗತ್ತಿನಲ್ಲಿರುವ ಮೌಡ್ಯತೆ ಹಾಗೂ ಅಂಧಕಾರವನ್ನು ತ್ಯಜಿಸಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು ವಾಣಿಜ್ಯಶಾಸ್ತ್ರ ಉಪನ್ಯಾಸಕ ಡಾ.ವಿನ್ಯಾಸ್ ಎಚ್ ಇವರು ಪ್ರತಿಜ್ಞಾವಿಧಿಯನ್ನು ನೆರವೇರಿಸಿದರು ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.