
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯು ಮಾ.01 ರಂದು ದತ್ತು ಗ್ರಾಮವಾದ ಬಿಳಿನೆಲೆ ಗ್ರಾಮ ಪಂಚಾಯತ್ ನಲ್ಲಿ ವಾರಾಂತ್ಯ ಶಿಬಿರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಬಿಳಿನೆಲೆ ಗ್ರಾಮ ಪಂಚಾಯಿತಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಹಾಗೂ ಕೆ ಎಸ್ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾದ ಆರತಿ ಕೆ ಹಾಗೂ ಸುಮಿತ್ರ ಉಪಸ್ಥಿತರಿದ್ದರು. ಎನ್ಎಸ್ಎಸ್ ಘಟಕದ ಸ್ವಯಂ ಸೇವಕರಿಂದ ಪಂಚಾಯತ್ ಕಟ್ಟಡ ಮತ್ತು ಆವರಣವನ್ನು ಸ್ವಚ್ಛಗೊಳಿಸಲಾಯಿತು.
