ವಿದ್ಯಾರ್ಥಿಗಳಿಗೆ ಎಳೆಯ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇಂದು(ಮಾ.05) ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿದೆ. ಬೆಳಗ್ಗಿನಿಂದ ಮದ್ಯಾಹ್ನದ ತನಕ ನಡೆಯುವ ಈ ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಹಣ್ಣು-ತರಕಾರಿಗಳು, ತಿಂಡಿಗಳು, ಜ್ಯೂಸ್ ಹೀಗೆ ವಿವಿಧ ರೀತಿಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಹರಿಹರ ಪಳ್ಳತ್ತಡ್ಕದ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಈ ಮೆಟ್ರಿಕ್ ಮೇಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕೆಂದು ವಿನಂತಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- March 6th, 2025