
ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಮಾ.01 ರಂದು ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಎ.ಕೆ ಜಯರಾಮ್ ಅಂಬೆಕಲ್ಲು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಹಾಲಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಪೋಷಕರು, ವಿದ್ಯಾರ್ಥಿಗಳು ಹಾಗೂ ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)