
ರೋಟರಿ ಕ್ಲಬ್ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್(ರಿ.), ಸೆಂಚುರಿ ಗ್ರೂಪ್ ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.09 ರಂದು ಬೆಳಿಗ್ಗೆ 9:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)
