

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ವಿಜ್ಞಾನ ಪ್ರಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್ ವಿಜ್ಞಾನ ಪ್ರಯೋಗ ಕಾರ್ಯಕ್ರಮವನ್ನು ಸೌರ ಮಂಡಲ ಮಾದರಿ ತಿರುಗಿಸುವುದರ ಮೂಲಕ ಉದ್ಘಾಟನೆ ಮಾಡಿದರು. ವೇದಿಕೆಯಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯನಾಯ್ಕ, ಉಪಾಧ್ಯಕ್ಷೆ ಹರಿಣಾಕ್ಷಿ ಉಪಸ್ಥಿತರಿದ್ದರು. 5 ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಂದ ಸುಮಾರು 80ಕ್ಕೂ ಮಿಕ್ಕಿ ವಿಜ್ಞಾನ ಮಾದರಿ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಸದಸ್ಯರು, ಪೋಷಕ ವೃಂದ, ಪ್ರೌಢ ಶಾಲೆಯ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು, ಸ್ಥಳಿಯ ಆಶ್ರಮ ಶಾಲೆಯ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದ ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಶಿಕ್ಷಕ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯಗುರು ಉದಯಕುಮಾರ್ ರೈ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ಶುಭ ಡಿ ವಂದಿಸಿದರು. ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.