
ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಕ್ಕೆ ಹರ್ಷಕುಮಾರ್ ಮುಂಡೋಡಿ ಮನೆಯವರಿಂದ ಪಲ್ಲಕ್ಕಿ ಸಮರ್ಪಣೆ ನಡೆಯಲಿದ್ದು ಮಾ. 08 ರಂದು ಕ್ಷೇತ್ರಕ್ಕೆ ಆಗಮಿಸಿದ ಪಲ್ಲಕ್ಕಿಗೆ ಆಡಳಿತ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಪಲ್ಲಕ್ಕಿಯ ಕೆತ್ತನೆ ಕೆಲಸ ಮಾಡಿದ ಶಿಲ್ಪಿಗಳಾದ ಹರೀಶ್ ರವರು ಪಲ್ಲಕ್ಕಿಗೆ ಪೂಜೆ ಸಲ್ಲಿಸಿ ದೈವಸ್ಥಾನಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಾಳಿಕಾ ಪ್ರಸಾದ್ ಮುಂಡೋಡಿ ಹಾಗೂ ಸದಸ್ಯರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.
