
ಯುವಕ ಮಂಡಲದ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಸಕ್ರಿಯ ಕಾರ್ಯಕರ್ತರು, ಪ್ರಸ್ತುತ ಐನೆಕಿದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ನವೀನ್ ಕಟ್ರಮನೆ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಸಾರ್ವಜನಿಕ ಶ್ರದ್ಧಾಂಜಲಿ ನುಡಿ ನಮನ ಕಾರ್ಯಕ್ರಮವು ಮಾ.10 ರಂದು ಐನೆಕಿದು ಅಮೃತ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಚಂದ್ರಹಾಸ ಶಿವಾಲ, ಹಿರಿಯ ಬಿಜೆಪಿ ಪ್ರಮುಖರಾದ ವಿಶ್ವನಾಥ್ ಬಿಳಿಮಲೆ, ಜಯಪ್ರಕಾಶ್ ಕೂಜುಗೋಡು, ಭವಾನಿಶಂಕರ ಪೈಲಾಜೆ, ಎಂ.ಎಲ್.ಪಿ.ಸಿ ಯ ನಿವೃತ್ತ ಪ್ರಾಚಾರ್ಯರಾದ ಅಶೋಕ್ ಮೂಲೆಮಜಲು, ಐನೆಕಿದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕುಮಾರಿ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಪೈಲಾಜೆ ಉಪಸ್ಥಿತರಿದ್ದರು.
ಭುಕ್ಷಿತ್ ನೀರ್ಪಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.
