ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನೇರಳಕಟ್ಟೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಇನ್ನರ್ ವೀಲ್ಸ್ ಕ್ಲಬ್, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಮತ್ತು ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 16 ಭಾನುವಾರದಂದು ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ಶಿಬಿರದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ನೆರವೇರಿಸಲಿರುವರು.
ಶಿಬಿರದಲ್ಲಿ ತಜ್ಞ ವೈದ್ಯರುಗಳು ಕಣ್ಣು, ಕಿವಿ, ಮೂಗು, ಗಂಟಲು, ಚರ್ಮರೋಗ ,ಮಧುಮೇಹ, ರಕ್ತದೊತ್ತಡಗಳ ಪರೀಕ್ಷೆಗಳನ್ನು ಮಾಡಲಿದ್ದು, ವೈದ್ಯಕೀಯ ಪರೀಕ್ಷೆ ಅಗತ್ಯವಿರುವ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಇದರ ಉಪಯೋಗಗಳನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ತಿಳಿಸಿದ್ದಾರೆ.
- Tuesday
- March 11th, 2025