2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಭಾರತೀಯ ಸಂಸ್ಕೃತಿಯ ಆಚಾರ ವಿಚಾರದಂತೆ ಮಾತಾ ಪಿತೃ ಗುರುವಂದನಾ ಕಾರ್ಯಕ್ರಮದ ಮೂಲಕ ವಿಶೇಷ ರೀತಿಯಲ್ಲಿ ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳ ತಂದೆ ತಾಯಿ ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳು ತಮ್ಮ ಹೆತ್ತವರ ಪಾದಪೂಜೆ ನಡೆಸಿ, ಗಂಧ ತಿಲಕವನ್ನು ಹಚ್ಚಿ, ಆರತಿ ಬೆಳಗಿ ಪುಷ್ಪಾರ್ಚನೆಯೊಂದಿಗೆ ಹೆತ್ತವರ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಅದೇ ರೀತಿಯಲ್ಲಿ ಗುರು ವೃಂದದವರ ಆಶೀರ್ವಾದ ಪಡೆದುಕೊಂಡರು. ತುಂಬಾ ಭಾವನಾತ್ಮಕವಾಗಿ ನಡೆದ ಕಾರ್ಯಕ್ರಮವನ್ನು ಅಚ್ಚುತ ಅಟ್ಲೂರು ನಡೆಸಿಕೊಟ್ಟರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ತಳೂರ್ ರವರು ವಹಿಸಿದರು. ಶಾಲೆಯ ಸಂಚಾಲಕ ಎ.ವಿ. ತೀರ್ಥರಾಮ ರವರು ಮಾತನಾಡಿ ವಿದ್ಯಾರ್ಥಿಗಳಿಗೆ, ಹೆತ್ತವರಿಗೆ, ನಾಡಿಗೆ ಮತ್ತು ವಿದ್ಯಾ ಸಂಸ್ಥೆಗೆ ಕೀರ್ತಿ ತರುವಂತವರಾಗಿ ಎಂದು ಶುಭ ಹಾರೈಸಿದರು. ವಿದ್ಯಾರ್ಥಿಗಳು ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಶಾಲೆಯ ಮುಖ್ಯ ಶಿಕ್ಷಕರಾದ ಗದಾಧರ ಬಾಳುಗೋಡು ಪ್ರಾಸ್ತವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಶಾಲಾ ನಿರ್ದೇಶಕರಾದ ಕೆ ಆರ್ ರಾಧಾಕೃಷ್ಣ ಮಾವಿನ ಕಟ್ಟೆ ಮತ್ತು ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ವೆಂಕಟರಮಣ ಹೊಸೊಳಿಕೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಯನ್ನು ನೀಡಲಾಯಿತು. ಅದೇ ರೀತಿಯಲ್ಲಿ ವಿದ್ಯಾರ್ಥಿಗಳು ತಮ್ಮ ಕೊಡುಗೆಯನ್ನು ಹಸ್ತಾಂತರಿಸಿದರು. 9ನೇ ತರಗತಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಸಭಾ ಅಧ್ಯಾಪಕರಾದ ಪುನೀತ್ ರವಿ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಕೊನೆಯಲ್ಲಿ ಶಿಕ್ಷಕಿ ಗೌತಮಿ ಯವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಕುಮಾರಿ ರಚಿತಾ ರವರು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಎಲ್ಲಾ ಪೋಷಕರು ವಿದ್ಯಾರ್ಥಿಗಳು ಶಿಕ್ಷಕರು ಸಾಂಪ್ರದಾಯಿಕ ರೀತಿಯಲ್ಲಿ ಬಾಳೆ ಎಲೆ ಊಟದೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.
Like this:
Like Loading...