
ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದಿಂದ 10ಮಾರ್ಚ್ 2025 ರಂದು ಪುತ್ತೂರು ಸೆಷನ್ಸ್ ನ್ಯಾಯಾಲಯಕ್ಕೆ ಅಂತಿಮ ಬಿಬಿಎ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಶಿವಪ್ರಸಾದ್ ಎಸ್ ಅವರ ಮಾರ್ಗದರ್ಶನದಲ್ಲಿ ಹಿರಿಯ ವಕೀಲ ಮತ್ತು ನೋಟರಿ ಜಯರಾಮ್ ಚಿಲ್ತಡ್ಕ ಮತ್ತು ವಕೀಲ ಚೇತನ್ ಕೆ ಅವರ ಸಹಕಾರದಿಂದ ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮೌಲ್ಯಯುತ ಒಳನೋಟಗಳನ್ನು ಪಡೆದರು ಹಾಗೂ ಪಠ್ಯಕ್ಕೆ ಸಂಬಂಧಪಟ್ಟಂತೆ ಅನುಭವಾತ್ಮಕ ಕಲಿಕೆ ಮತ್ತು ನ್ಯಾಯಾಂಗ ವ್ಯವಸ್ಥೆಯ ಅಂಶಗಳನ್ನು ವಿದ್ಯಾರ್ಥಿಗಳು ಪಡೆದರು.
