
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ಹಾಗೂ ತ್ಯಾಜ್ಯ ವಿಲೇವಾರಿ ವಾಹನದ ಹಸ್ತಾಂತರ ಕಾರ್ಯಕ್ರಮವು ಮಾ.12 ರಂದು ನಡೆಯಿತು.
ಕೀರ್ತಿ ಸಂಜೀವಿನಿ ಒಕ್ಕೂಟದ ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ಕಾರ್ಯನಿರ್ವಹಿಸಲಿದೆ. ಘಟಕವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ ಕಟ್ಟ ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರುಗಳಾದ ಪುಷ್ಪರಾಜ್ ಪಡ್ಪು, ಅಶ್ವಥ್ ಯಳದಾಳು, ಜಯಶ್ರೀ ಚಾಂತಾಳ, ಶಿವಮ್ಮ ಕಟ್ಟ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ, ಕಾರ್ಯದರ್ಶಿ ಮೋಹನ್ ಕಡ್ತಲ್ ಕಜೆ, ಗ್ರಾ.ಪಂ ಸಿಬ್ಬಂದಿಗಳು, ಗ್ರಾಮಸ್ಥರು ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)