
ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದ್ದು ಇಂದು ಗುತ್ತಿಗಾರಿಗೆ ಆಗಮಿಸಿದ್ದು ಪೂರ್ಣಕುಂಭದೊಂದಿಗೆ ಸ್ವಾಗತ ನೀಡಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು, ಮಹಿಳೆಯರು ಭಾಗವಹಿಸಿದ್ದರು.
ಸಂಜೆ ಸುಳ್ಯಕ್ಕೆ ಆಗಮಿಸುವ ನಂದಿ ರಥಯಾತ್ರೆ ಗೆ ಜ್ಯೋತಿ ಸರ್ಕಲ್ ನಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಲಿದ್ದು ಬಳಿಕ ಮೆರವಣಿಗೆಯಲ್ಲಿ ಸಾಗಿ ಚೆನ್ನಕೇಶವ ದೇವಸ್ಥಾನದ ಬಳಿ ಸಭಾಕಾರ್ಯಕ್ರಮ ನಡೆಯಲಿದೆ