
ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಅಧ್ಯಕ್ಷರಾದ ಮೀರಾಝ್ ಸುಳ್ಯ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಗ್ರಾಮಾಂತರ ಜಿಲ್ಲಾ ಪ್ರ.ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ವೀಕ್ಷಕರಾಗಿ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ವಿಷಯದಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಪ್ರತೀ ಬ್ರಾಂಚ್ ಮಟ್ಟದಿಂದ ಆಯಾಯ ಕ್ಷೇತ್ರದ ಅಭ್ಯರ್ಥಿಗಳ ಹೆಸರಿನ ಪಟ್ಟಿಯನ್ನು ಅಂತಿಮ ಮಾಡಿ ಬ್ಲಾಕ್ ಮುಖಾಂತರ ವಿಧಾನಸಭಾ ಸಮಿತಿಗೆ ತಲುಪಿಸಬೇಕು ಹಾಗೂ ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಬೇಕೆಂದು ಸಭೆಯಲ್ಲಿ ನಿರ್ದೇಶನ ನೀಡಲಾಯಿತು ವಿಶೇಷವಾಗಿ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಯನ್ನು ಎದುರಿಸುವ ರೂಪುರೇಷೆಗಳನ್ನು ತಯಾರಿಸಲಾಯಿತು.
ಸಭೆಯಲ್ಲಿ ವಿಧಾನಸಭಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷೇತ್ರ ಸಮಿತಿಯ ಕಾರ್ಯದರ್ಶಿ ರಫೀಕ್ ಎಂ ಎಸ್ ರವರು ಸ್ವಾಗತಿಸಿದರು ಕೋಶಾಧಿಕಾರಿಯವರಾದ ಅಬ್ದುಲ್ ರಹಿಮಾನ್ ತಂಬಿನಮಕ್ಕಿ ಯವರು
ಧನ್ಯವಾದ ಸಮರ್ಪಿಸಿದರು.