Ad Widget

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕ

. . . . . . . . .
ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯ, ಬೆಳಗಾವಿ, ಜೆ.ಎನ್.ಎನ್.ಸಿ.ಇ, ಶಿವಮೊಗ್ಗದಲ್ಲಿ  ನಡೆದ 2024-25ನೇ ಸಾಲಿನ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ, 8ನೇ ಸೆಮಿಸ್ಟರ್ ವಿದ್ಯಾರ್ಥಿ 

ಟಿಷನ್ ಮಾದಪ್ಪ ಅವರು 21 ಕಿಲೋ ಮೀಟರ್ ಹಾಗೂ 5೦೦೦ ಮಿ. ಓಟದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡು ಅದಲ್ಲದೆ 1೦,೦೦೦ ಮಿ. ಓಟದಲ್ಲಿ ಬೆಳ್ಳಿ ಪದಕವನ್ನು ಗೆದ್ದಿರುತ್ತಾರೆ. ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ 4ನೇ ಸೆಮಿಸ್ಟರ್ ವಿದ್ಯಾರ್ಥಿನಿ ರೇಶ್ಮಾ ಉದ್ದ ಜಿಗಿತದಲ್ಲಿ ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. 4*400ಮೀಟರ್ mixed relay ಯಲ್ಲಿ ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ರಕ್ಷಿತಾ, ಮಂಜುನಾಥ, ವಿಘ್ನೇಶ್ ಮತ್ತು ರೇಷ್ಮಾ ೪ನೇ ಸೆಮಿಸ್ಟರ್ ಬೆಳ್ಳಿ ಪದಕವನ್ನು ಗೆದ್ದಿರುತ್ತಾರೆ.
ಇವರ ಶ್ರೇಷ್ಠ ಸಾಧನೆಗೆ ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಡಾ. ಜ್ಯೋತಿ ಆರ್. ಪ್ರಸಾದ್
ಸೆಕ್ರೆಟರಿ ಕಮಿಟಿ ‘ಬಿ’ ಎ.ಒ.ಎಲ್.ಇ(ರಿ), ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಎಕ್ಸೆಕ್ಯುಟಿವ್ ಡೈರೆಕ್ಟರ್, ಕೆವಿಜಿಡಿಸಿ&ಹೆಚ್. ಶ್ರೀ ಮೌರ್ಯ ಆರ್. ಪ್ರಸಾದ್, ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಡಾ. ಪ್ರಜ್ಞಾ ಎಂ.ಆರ್., ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಜೇಶ್ ಡಿ.ಎಸ್ ಮತ್ತು ಕ್ರೀಡಾ ಚಟುವಟಿಕೆಗಳ ಮುಖ್ಯ ಸಂಯೋಜಕರಾದ ಪ್ರೊ. ಅಜಿತ್ ಬಿ.ಟಿ. ಹಾಗೂ ಬೋದಕ, ಬೋದಕೇತರ ಸಿಬ್ಬಂದಿ ವರ್ಗದವರು ಅಭಿನ೦ದಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!