Ad Widget

ಸುಬ್ರಹ್ಮಣ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

. . . . . . . . .

ಇಂದು ಪ್ರಪಂಚದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಾತ್ರವಲ್ಲದೆ, ಅತ್ಯುನ್ನತ ಹುದ್ದೆ ಅಲಂಕರಿಸಿರುತ್ತಾರೆ. ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಹಿಡಿದು ತಾಲೂಕು, ಜಿಲ್ಲೆ, ರಾಜ್ಯ ಹಾಗೂ ದೇಶದ ಎಲ್ಲಾ ಸಾರ್ವಜನಿಕ ಸಂಸ್ಥೆಗಳಲ್ಲಿ, ಉದ್ದಿಮೆಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ, ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಾರಥಿಯಾಗಿ ಮುನ್ನಡೆಯುತ್ತಿದ್ದಾರೆ. ಇಡೀ ನಾರಿ ಶಕ್ತಿ ನಮ್ಮ ದೇಶದ ಆಸ್ತಿ ಆಗಿರುತ್ತದೆ.” ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ನುಡಿದರು.
ಅವರು ಶುಕ್ರವಾರ ಸುಬ್ರಹ್ಮಣ್ಯದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದೇವಳದ ಎದುರುಗಡೆಯಿಂದ ಆರಂಭಿಸಲಾದ ನಾರಿ ಶಕ್ತಿ ಜಾಥ ವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶ್ರೀ ದೇವಳದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಲೋಲಾಕ್ಷ ಕೈಕಂಬ, ರೋಟರಿ ವಲಯ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ, ಕರ್ನಾಟಕ ರಾಜ್ಯ ಮಹಿಳಾ ತರಬೇತುದಾರರ ಸಂಚಲನ ಸಮಿತಿ ಅಧ್ಯಕ್ಷೆ ಆಶಲತಾ ಸುವರ್ಣ, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಮಧುಮತಿ ಬೊಳ್ಳೂರು, ಸುಬ್ರಹ್ಮಣ್ಯ ವಾಣಿ ವನಿತ ಸಮಾಜದ ಅಧ್ಯಕ್ಷೆ ಪುಷ್ಪ ಕೆ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಗುಣವತಿ, ಸುಬ್ರಹ್ಮಣ್ಯ ಹಾಲು ಉತ್ಪಾದಕ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಪ್ರೇಮ ರಘು, ನವೋದಯ ಸಹಾಯ ಸಂಘಗಳ ಅಧ್ಯಕ್ಷೆ ಸವಿತಾ, ಗ್ರಾಮ ಅಭಿವೃದ್ಧಿ ಯೋಜನೆ ಅಧ್ಯಕ್ಷೆ ಪವಿತ್ರ ದಿನೇಶ್, ಸುಬ್ರಹ್ಮಣ್ಯ ವಾಣಿ ವನಿತಾ ಸಮಾಜದ ಮಾಜಿ ಅಧ್ಯಕ್ಷೆ ಶೋಭಾ ನಲ್ಲೂರಾಯ, ತ್ರಿವೇಣಿ ಧಾಮ್ಲೆ, ರತ್ನವತಿ ನುಚಿಲ, ಹೇಮವತಿ ನುಚಿಲ, ಸುಜಾತ ಗಣೇಶ್ ಮತ್ತಿತರರು ಹಾಜರಿದ್ದರು. ತದನಂತರ ನಾರಿ ಶಕ್ತಿ ಜಾತವು ಮುಖ್ಯ ರಸ್ತೆಯಲ್ಲಿ ಘೋಷಣೆಗಳೊಂದಿಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಭವನದವರೆಗೆ ಸಾಗಿದರು.
ಸಭಾ ಕಾರ್ಯ ಕ್ರಮದಲ್ಲಿ ಮಹಿಳಾ ಆಟೋ ಚಾಲಕಿ ಲೀಲಾವತಿ ಹಾಗೂ ಹೈನುಗಾರಿಕೆಯಲ್ಲಿ ಯಶಸ್ಸನ್ನು ಕಂಡ ಲಲಿತ ಅವರುಗಳನ್ನ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ಮಲ್ಲಿಕಾ ಜ್ಯೋತಿ ಗುಡ್ಡೆ ಅವರಿಂದ ಏಕವ್ಯಕ್ತಿ ನಾಟಕ ಪ್ರದರ್ಶನಗೊಂಡಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading