
ಸುಬ್ರಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಸರ್ಕಾರದ ಯೋಜನಾ ಸಚಿವ ಡಿ. ಸುಧಾಕರ್ ಮಾ.22 ರಂದು ಮಧ್ಯಾಹ್ನ ಭೇಟಿ ನೀಡಿದರು. ಸಚಿವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್ ಅವರು ಸ್ವಾಗತಿಸಿ ಬರಮಾಡಿಕೊಂಡರು. ಸಚಿವರು ಶ್ರೀಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ತುಲಾಭಾರ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
