
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.
