
ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತಿ ಹೆಚ್.ಭೀಮರಾವ್ ವಾಷ್ಠರ್ ರವರ ನೇತೃತ್ವದಲ್ಲಿ “ಸಾಹಿತ್ಯ ಮತ್ತು ಸಾಂಸ್ಕೃತಿಕ ಮಹಾ ಸಂಭ್ರಮ-2025” ಕಾರ್ಯಕ್ರಮವು ಮಾ.23 ರಂದು ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಿರುತೆರೆ ಹಾಗೂ ಹಿರಿತೆರೆ ರಂಗದ ಸಾಧನೆಯನ್ನು ಗುರುತಿಸಿ 2025ನೇ ಸಾಲಿನ “ಚಂದನ ಪ್ರತಿಭಾ ರತ್ನ ಪ್ರಶಸ್ತಿ” ಯನ್ನು ಯುವ ಕಲಾವಿದ ಮಿಥುನ್ ಕುಮಾರ್ ಸೋನಾ ರವರಿಗೆ ಅತಿಥಿಗಳ ಸಮ್ಮುಖದಲ್ಲಿ ಪ್ರಧಾನ ಮಾಡಲಾಯಿತು.
ರಂಗಭೂಮಿ, ಕಿರುಚಿತ್ರ, ಟೆಲಿಫಿಲ್ಮ್, ಆಲ್ಬಮ್ ಹಾಡುಗಳು ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಇವರು ಕೊಲ್ಲಮೊಗ್ರು ಗ್ರಾಮದ ಕಟ್ಟ-ಗೋವಿಂದನಗರದ ಎಸ್.ಎನ್ ಮಹಾಬಲೇಶ್ವರ ಹಾಗೂ ಶ್ರೀಮತಿ ರತ್ನಾವತಿ ದಂಪತಿಗಳ ಪುತ್ರ.(ವರದಿ : ಉಲ್ಲಾಸ್ ಕಜ್ಜೋಡಿ)
