
ಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಯನ್ನು ಖಂಡಿಸಿ ಸುಳ್ಯ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಡಿಕೆಶಿ ತಮ್ಮ ಹೇಳಿಕೆ ಹಿಂಪಡೆದು ರಾಜ್ಯದ ಜನರ ಕ್ಷಮೆ ಕೇಳಬೇಕು ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.
ಸಭೆಯಲ್ಲಿ ಮುಖಂಡರಾದ ಪಿ.ಕೆ.ಉಮೇಶ್, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಕುಸುಮಾಧರ ಎ.ಟಿ., ನಾರಾಯಣ ಎಸ್.ಎಂ. ಶಾಂತಿನಗರ, ಕೃಷ್ಣಯ್ಯ ಮೂಲೆತೋಟ, ಜಗನ್ನಾಥ ಜಯನಗರ, ಜಿನ್ನಪ್ಪ ಪೂಜಾರಿ ಕಲ್ಲುಮುಟ್ಟು, ಅಶೋಕ್ ಅಡ್ಕಾರು, ಪ್ರದೀಪ್ ಕಣಕ್ಕೂರು ಮತ್ತಿತರರು ಉಪಸ್ಥಿತರಿದ್ದರು.
