
ಸುಳ್ಯದ ನಾವೂರು ಎಂಬಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಚಂದ್ರಿಕಾ ಎಂಬ ಮಹಿಳೆಗೆ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಎಂಬವರು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸುತೇವೆ. FIR ದಾಖಲಿಸಿ 24 ಗಂಟೆ ಕಳೆದರೂ ಇನ್ನೂ ಬಂಧಿಸದ ಪೊಲೀಸ್ ಇಲಾಖೆ ಆದಷ್ಟು ಬೇಗ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ಅಗ್ರಹಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.