Ad Widget

ಬೆಳ್ಳಾರೆ : ಮಾ.30 ರಂದು ಅಮರ ಸುಳ್ಯ ವಿಜಯ ಸ್ಮರಣೆ ದಿನ

1837ರ ಮಾರ್ಚ್ 30 ರಂದು ಭಾರತದಲ್ಲಿ ಬ್ರಿಟೀಷರ ವಿರುದ್ಧ ಮೊಟ್ಟಮೊದಲ ಸಂಘಟಿತ ಪ್ರತಿರೋಧದ ದಾಖಲೆಬದ್ಧ ಉದಾಹರಣೆಯಾಗಿ “ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ” ವು ಬೆಳ್ಳಾರೆ ಯಲ್ಲಿ ಪ್ರಾರಂಭಗೊಂಡಿತು. ಈ ಐತಿಹಾಸಿಕ ದಿನವನ್ನು ನೆನಪಿಸಿಕೊಳ್ಳುವ ಸಲುವಾಗಿ 188 ವರ್ಷಗಳ ಬಳಿಕ ನಾಳೆ ಮಾ.30 ರಂದು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಂಗಣದಲ್ಲಿ ಪೂರ್ವಾಹ್ನ 9:30ಕ್ಕೆ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್(ರಿ.), ಗ್ರಾಮ ಪಂಚಾಯತ್ ಬೆಳ್ಳಾರೆ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಹಾಗೂ ಅಕ್ಷಯ ಯುವಕ ಮಂಡಲ ನೆಟ್ಟಾರು ಇವುಗಳ ಆಶ್ರಯದಲ್ಲಿ “ಅಮರ ಸುಳ್ಯ ವಿಜಯ ಸ್ಮರಣೆ ದಿನ” ಆಚರಿಸಲಾಗುತ್ತಿದ್ದು, ಬೆಳಿಗ್ಗೆ 9:30ಕ್ಕೆ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ.ಎಲ್ ರೈ ಧ್ವಜಾರೋಹಣ ನೆರವೇರಿಸಲಿದ್ದು, ಬೆಳಿಗ್ಗೆ 10:00 ಗಂಟೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಅಭ್ಯಾಗತರಾಗಿ ಕರ್ನಾಟಕ ಭಾಷಾ ಅಲ್ಪಸಂಖ್ಯಾತರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರತೀಕ್ ಪೊನ್ನಣ್ಣ ಉಪಸ್ಥಿತರಿರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಮಕೃಷ್ಣ ಭಟ್ ಕುರುಂಬುಡೇಲು, ಕೆ.ಪಿ.ಎಸ್ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ, ಪ್ರಧಾನ ವಕ್ತಾರರಾಗಿ ವಿದ್ಯಾರಶ್ಮಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶಪಾಲರಾದ ಸೀತರಾಮ ಕೇವಳ ಇವರು ಉಪಸ್ಥಿತರಿರಲಿದ್ದಾರೆ. ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್(ರಿ.) ಇದರ ಅಧ್ಯಕ್ಷರಾದ ಅನಿಂದಿತ್.ಕೆ.ಎಸ್ ಪ್ರಸ್ತಾವನೆ ನೆರವೇರಿಸಲಿದ್ದು, ಈ ಕಾರ್ಯಕ್ರಮವು ನಮ್ಮ ಸ್ವಾತಂತ್ರ್ಯ ಹೋರಾಟದ ಅಪರೂಪದ ಪುಟಗಳನ್ನು ಸ್ಮರಿಸುವ ಪ್ರಯತ್ನವಾಗಿದ್ದು, ಈ ಮಹತ್ವದ ಸ್ಮರಣೋತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!