Ad Widget

ನವೋದಯ ಹಾಗೂ ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆಗೈದ ಕರಂಗಲ್ಲು ಶಾಲೆಯ ವಿದ್ಯಾರ್ಥಿಗಳು

. . . . . . . . .

ಕರಂಗಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ದೇವಚಳ್ಳ ಗ್ರಾಮದ ಪುಂಡರೀಕ ಮತ್ತು ಜಯಂತಿ ದಂಪತಿಗಳ ಪುತ್ರನಾದ ಧೃತಿಕ್.ಎಂ ಹಾಗೂ ದೇವಚಳ್ಳ ಗ್ರಾಮದ ಚಂದ್ರಹಾಸ ಮತ್ತು ಗಾಯತ್ರಿ ದಂಪತಿಗಳ ಪುತ್ರಿಯಾದ ಹಿತೈಷಿ.ಹೆಚ್ ಇವರುಗಳು 2024-25ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪ್ರಥಮ ಹಂತದಲ್ಲಿ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಅಲ್ಲದೇ ಈ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷೆಯಲ್ಲೂ ಶೇ.88 ಹಾಗೂ ಶೇ.86 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆ ಎಂದೇ ಹೇಳಬಹುದು.
ಈ ಬಗ್ಗೆ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸಾವಿತ್ರಿ ಕಜ್ಜೋಡಿ ರವರು “ಶಾಲೆಯಲ್ಲಿ ಕಲಿಕೆಯಲ್ಲೂ ಮುಂದಿದ್ದ ಈ ವಿದ್ಯಾರ್ಥಿಗಳು ನಮ್ಮ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ” ಎಂದು ಹೇಳಿದರು.
ಇವರಿಗೆ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ರವರು ತರಬೇತಿ ನೀಡಿರುತ್ತಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!