- Thursday
- April 3rd, 2025

ಮಂಡೆಕೋಲು ಗ್ರಾಮದ ಮುರೂರು ದ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡರವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ದಾನಗಳಿಗೆ ಹೆಸರುವಾಸಿಯಾಗಿದ್ದು ಕಳೆದ 800 ವರ್ಷಗಳಿಂದ...

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಅಡ್ಕಾರು ಸಮೀಪ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾ.03 ರಂದು ಸಂಜೆ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದರಿಂದ ಕೆಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2024-25 ನೇ ಸಾಲಿನ ಆರ್ಥಿಕ ವರ್ಷವೂ ಸಹಕಾರಿಗೆ ಪೂರ್ಣವಾಗಿ ವ್ಯವಹರಿಸಲು ದೊರಕಿದ ಪ್ರಥಮ ಆರ್ಥಿಕ ವರ್ಷವಾಗಿದ್ದು ಈ ಅವಧಿಯಲ್ಲಿ ಸದಸ್ಯರ ಸಹಕಾರದೊಂದಿಗೆ ರೂ. 19.22 ಕೋಟಿ ವ್ಯವಹಾರ ನಡೆಸಿ...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ದಿನಾಂಕ : 01/03/2024 ರಂದು ಹರಿಶ್ಚಂದ್ರ ಎಂಬುವರು ಚಲಾಯಿಸಿಕೊಂಡು ಬರುತ್ತಿದ್ದ ಅವಿನಾಶ್ ಬಸ್ ಬಸ್ಸನ್ನು ದುಡುಕುತನ ಮತ್ತು ಅಜಾರುಕತೆಯಿಂದ ಚಲಾಯಿಸಿಕೊಂಡು ಹೋಗಿ, ಅದೇ ಮಾರ್ಗವಾಗಿ ಪದ್ಮನಾಭ ರವರು ಚಲಾಯಿಸಿಕೊಂಡು ಹೋಗುತ್ತಿರುವ ಮೋಟಾರ್ ಸೈಕಲ್ ಗೆ ಓವರ್ ಟೆಕ್ ಮಾಡುವ ಬರದಲ್ಲಿ ಆರೋಪಿತನು ತನ್ನ ಬಸ್ಸನ್ನು ಎಡಬದಿಗೆ ಒಮ್ಮೆಗೆ...

ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...