Ad Widget

ರಶ್ಮಿ ನೆಕ್ಕಿಲರಿಗೆ 3ನೇ ರ‌್ಯಾಂಕ್

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಕುಮಾರಿ ರಶ್ಮಿರವರು ಇತಿಹಾಸ ವಿಭಾಗದಲ್ಲಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯಕ್ಕೆ 3ನೇ ರ‌್ಯಾಂಕ್  ಪಡೆದಿದ್ದಾರೆ. ಇವರು ಕಲ್ಲುಗುಂಡಿ ದಂಡೆಕಜೆಯ ನೆಕ್ಕಿಲ ಶ್ರೀ ಎಲ್ಯಣ್ಣ ಗೌಡ ಹಾಗೂ ಶ್ರೀಮತಿ ನಳಿನಿ ದಂಪತಿಗಳ ದ್ವಿತೀಯ ಪುತ್ರಿಯಾಗಿದ್ದು, 1ನೇ ತರಗತಿಯಿಂದ 7ನೇ...

ಗುತ್ತಿಗಾರು : ಕೆ.ಎಸ್.ಎಸ್. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ದಿನಾಂಕ 04/04/25ರಿಂದ 10/04/2025 ರಂದು ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್...
Ad Widget

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ‌ ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದ ಫಲಿತಾಂಶ ಪ್ರಕಟ – 100% ಫಲಿತಾಂಶ ದಾಖಲು

ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ ಬೆಂಗಳೂರು ಮಾರ್ಚ್ 2025 ರಲ್ಲಿ ನಡೆಸಿದ ಅಂತಿಮ ವರ್ಷದ ಸ್ನಾತಕೋತರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆವಿಜಿ ಆಯುರ್ವೇದ ವೈದ್ಯಕೀಯ ಕಾಲೇಜಿನ 02 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 01 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆಗೆ...

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರದಲ್ಲಿ ಭಾವ ತೀರ ಯಾನ ರನ್ನಿಂಗ್ – ಏ.05ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶನಿವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ವೈದ್ಯಕೀಯ ಅಧಿಕಾರಿಯಾಗಿ ಡಾ| ನಂದಕುಮಾರ್ ಬಾಳಿಕಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 29 ವರ್ಷಗಳಿಂದ ಸೇವೆ ಸಲ್ಲಿಸಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವಯೋನಿವೃತ್ತಿ ಹೊಂದಿರುವ ಡಾ| ನಂದಕುಮಾರ್ ಬಾಳಿಕಳ ರವರು ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಕೆ.ವಿ.ಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರು ಹಾಗೂ ಎ.ಓ.ಎಲ್.ಇ ಅಧ್ಯಕ್ಷರೂ...

ಸುಳ್ಯ :  ಆರೋಗ್ಯ ರಕ್ಷಾ ಸಮಿತಿಯ ಸಭೆ

ಸುಳ್ಯ ತಾಲೂಕು ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿ ಸಾಮಾನ್ಯ ಸಭೆ ಏ. 01 ರಂದು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಹೀದ್ ಪಾರೆ ಚಂದ್ರನ್ ಕೂಟೇಲ್, ಅಬ್ದುಲ್ ರಝಾಕ್,  ರಾಧಾಕೃಷ್ಣ ಪಾರಿವಾರಕಾನ, ಸುರೇಶ್ ಕಾಮತ್ ಗಿರೀಶ್ ಪಡ್ದoಬೈಲ್, ಸಂಜೀವ ಬಡ್ಡೆಕಲ್ಲು, ತಾಲೂಕು...

ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಗಳಾಗಿ  ಕೆ.ಪಿ.ಜಾನಿ ನೇಮಕ

ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಕೆ.ಪಿ.ಜಾನಿಯವರನ್ನು ಮೈಸೂರು ವಿಭಾಗೀಯ ವ್ಯಾಪ್ತಿಯಲ್ಲಿ ಬರುವ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕಾರ್ಮಿಕ ಕಲ್ಯಾಣ ಮಂಡಳಿಯ ಉಸ್ತುವಾರಿಗಳಾಗಿ ಕಾರ್ಮಿಕ ಸಚಿವರಾದ  ಸಂತೋಷ್ ಲಾಡ್ ಅವರ ಸೂಚನೆಯ ಮೇರೆಗೆ ನೇಮಕಗೊಳಿಸಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ ಡಿ....
error: Content is protected !!