
33ಕೆ.ವಿ. ಕಾವು- ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಏ. 08 ಮಂಗಳವಾರ ದಂದು ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು – ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
