
ಪ್ರಥಮ ಪಿಯುಸಿ ಅನುತ್ತೀರ್ಣರಾಗಿ ಅಥವಾ ಎಸ್ ಎಸ್ ಎಲ್ ಸಿ ಯಿಂದ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಮಾದರಿಯಲ್ಲೇ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 15 ವಿದ್ಯಾರ್ಥಿಗಳ ಪೈಕಿ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 93 ಫಲಿತಾಂಶ ದಾಖಲಾಗಿದೆ. ಒಬ್ಬ ವಿದ್ಯಾರ್ಥಿ ವಿಶಿಷ್ಟ ಶ್ರೇಣಿಯಲ್ಲಿ ಐದು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 4ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ, 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಮೊಹಮ್ಮದ್ ಸಫಾನ್ (532), ಮಹಮ್ಮದ್ ಸುಹೈಲ್ (482), ಮಹೇಶ್ (447), ಅಕ್ಷಯ (427),ವೀಣಾ kumari(407), ಮಹಮ್ಮದ್ ಅನಾಸ್ ಅಲಿ (362)ಅತೀ ಹೆಚ್ಚು ಅಂಕ ಗಳಿಸಿದ್ದಾರೆ.