
2024-25 ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಎಸ್.ಎಸ್.ಪಿ.ಯು. ನಲ್ಲಿ ಶೇ.97 ಫಲಿತಾಂಶ ಬಂದಿದೆ. ಒಟ್ಟು ಪರೀಕ್ಷೆಗೆ ಹಾಜರಾದ 415 ವಿದ್ಯಾರ್ಥಿಗಳಲ್ಲಿ 402 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ 68 ಡಿಸ್ಟಿಂಕ್ಷನ್, 264 ಪ್ರಥಮ, 59 ದ್ವಿತೀಯ, 11 ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ 99 ವಿದ್ಯಾರ್ಥಿಗಳು ಹಾಜರಾಗಿದ್ದು 96% ಫಲಿತಾಂಶ ದಾಖಲಾಗಿದೆ. 30 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ಸೂರಜ್ 581 ಅಂಕ ಪಡೆದಿದ್ದಾರೆ. ಗಣಕ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ 95 ವಿದ್ಯಾರ್ಥಿಗಳು ಹಾಜರಾಗಿದ್ದು, 98% ಫಲಿತಾಂಶ ದಾಖಲಾಗಿದೆ. 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ಸಾನಿಕಾ 575 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ 89 ವಿದ್ಯಾರ್ಥಿಗಳು ಹಾಜರಾಗಿದ್ದು, 98% ಫಲಿತಾಂಶ ದಾಖಲಾಗಿದೆ. 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ಪ್ರೀತಿ ಆರ್.ಕೆ. ರೈ 573 ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ 132 ವಿದ್ಯಾರ್ಥಿಗಳು ಹಾಜರಾಗಿದ್ದು, 97% ಫಲಿತಾಂಶ ದಾಖಲಾಗಿದೆ. 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ವರ್ಷಿಣಿ ಹಾಗೂ ಶ್ರೇಯಾ 565 ಅಂಕ ಪಡೆದಿದ್ದಾರೆ.