ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. 50 ನೇ ದಿನಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಥಿಯೇಟರ್ ನಲ್ಲಿ ವಿಶೇಷ ಸಂಭ್ರಮಾಚರಣೆ ನಡೆಯಲಿದೆ.
