
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ಫಿಲೋಮಿನ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೊಲ್ಲಮೊಗ್ರದ ನೀತಿ.ಎನ್.ಬಿ
591(98.5%) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಒಂಬತ್ತನೇ ರ‌್ಯಾಂಕ್ ಪಡೆದುಕೊಂಡಿದ್ದಾರೆ. ಇವರು ಕೆ.ವಿ.ಜಿ ಪ್ರೌಢಶಾಲೆ ಕೊಲ್ಲಮೊಗ್ರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಗೌಡ ಎನ್ ಮತ್ತು ಶ್ರೀಮತಿ ಶಾರದಾ ದಂಪತಿಗಳ ಪುತ್ರಿ. ಇವರು ಗುತ್ತಿಗಾರು ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿಯಾಗಿರುತ್ತಾರೆ.