
ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್-ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಬೆಲೆ ಏರಿಕೆ ವಿರುದ್ಧ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಏ.12 ರಂದು ಸಂಜೆ 4:00 ಗಂಟೆಗೆ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ ಎಂ.ಜೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
