
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಫಲಿತಾಂಶವು ನಾಳೆ(ಏ.11) ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.
ಜ.19 ರಂದು ಸೊಸೈಟಿ ನೂತನ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆಗೆ ತಡೆ ನೀಡಲಾಗಿತ್ತು.
ಇದೀಗ ಹೈಕೋರ್ಟ್ ಆದೇಶದಂತೆ ಡಿ.ಆರ್ ರವರು ಫಲಿತಾಂಶ ಘೋಷಣೆ ನಿಗದಿಪಡಿಸಿ ನೋಟೀಸ್ ಕಳಿಸಿರುವುದಾಗಿ ತಿಳಿದುಬಂದಿದೆ.
