
ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬರುವ ಸಾವಿರಾರು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿಯೆಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಸಾವಿರಾರು ಯಾತ್ರಾರ್ಥಿಕರು ಅಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ರು,ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮತ್ತು ಸಂಸದ ಕ್ಯಾ.ಬ್ರಿಜೇಶ್ ಚೌಟರು ವಿಶೇಷ ಮುತುವರ್ಜಿಯಿಂದ ರೈಲ್ವೇ ಸಚಿವಾಲಯದೊಂದಿಗೆ ಫಾಲೋ ಆಫ್ ಮಾಡಿದ ಕಾರಣದಿಂದ ಇದೀಗ ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆ ಇಡೇರುತ್ತಿದ್ದು ಏಪ್ರಿಲ್ 12 ರಂದು ಸಂಜೆ 4 ಗಂಟೆಗೆ ರೈಲು ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಕೇಂದ್ರ ಸಚಿವರು,ಸಂಸದರು, ಪ್ರಮುಖರು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ರೈಲು ಮೂಲಕ ಅಗಮಿಸಲಿದ್ದು ಈ ವೇಳೆ ಆಯಾಯ ನಿಲ್ದಾಣದಲ್ಲಿ ಕಾರ್ಯಕರ್ತರು,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತಿದ್ದೇವೆ. ಬಿಜೆಪಿ ಮಂಡಲ ಸಮಿತಿ ಪರವಾಗಿ ಕೇಂದ್ರ ರೈಲ್ವೇ ಸಚಿವರನ್ನು ಮತ್ತು ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆಯೆಂದು ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.