
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ದಿನದ ಸಂಭ್ರಮಾಚರಣೆ ಏ.11 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ನಟರು ಹಾಗೂ ಗಣ್ಯರು ಉಪಸ್ಥಿತರಿದ್ದು, ಚಿತ್ರ ವೀಕ್ಷಿಸಿದರು. ಇದೀಗ 51 ನೇ ದಿನಕ್ಕೆ ಕಾಲಿರಿಸಿದ್ದು, ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.12ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
