
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ದಿನಾಂಕ 04/04/25ರಿಂದ 10/04/2025 ರಂದು ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು. ಇದರ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾ ಕುಮಾರ್ ನಾಯರ್ ಕೆರೆ ಸಮಾರೋಪ ಭಾಷಣವನ್ನು ಮಾಡಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ಯಾರೆಂಟಿ ಅನುಷ್ಠಾನ ಯೋಜನಾ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಗುತ್ತಿಗಾರು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಕುಶಾಲಪ್ಪ ತುಂಬತ್ತಾಜೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರಿನ ಮಾಜಿ ಅಧ್ಯಕ್ಷ ಶ್ರೀ ವೆಂಕಟ್ ದಂಬೆಕೋಡಿ, ಪದವಿ ಪೂರ್ವ ಕಾಲೇಜ್ ವೇಣೂರಿನ ಸಹಶಿಕ್ಷಕರು ಹೆರಾಲ್ಡ್ ನೆಲ್ಸನ್ ಕ್ಯಾಸ್ಟೋಲಿನೋ, ಗುತ್ತಿಗಾರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ, ಕೆ ಎಸ್ ಎಸ್ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ ನಾಯರ್ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ. ಟಿ, ಶಿಬಿರದ ಸಂಯೋಜಕ ಸುಧೀರ್ ಅಮೈ, ಪದವಿ ಪೂರ್ವ ಕಾಲೇಜು ಗುತ್ತಿಗಾರಿನ ಎಸ್‌ಡಿಎಂಸಿ ಸದಸ್ಯ ಕೇಶವ ಕಾಂತಿಲ, ಕೆಎಸ್ಎಸ್ ಕಾಲೇಜಿನ ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಸುಮಿತ್ರ ಹಾಗೂ ಎನ್ಎಸ್ಎಸ್ ಘಟಕದ ನಾಯಕರುಗಳಾದ ನಿಶಾ ಗೌರಿ ಎಂ, ಧನ್ಯ ಬಿ ಎಸ್, ಪ್ರದೀಪ್ ಸಿ.ವಿ, ಜೀವನ್ ಎ ಉಪಸ್ಥಿತರಿದ್ದರು. ಗುತ್ತಿಗಾರು ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಪೂರ್ಣಿಮಾ ಸ್ವಾಗತಿಸಿ, ಕೆ ಎಸ್ ಎಸ್ ಕಾಲೇಜಿನ ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಆರತಿ.ಕೆ ವಂದಿಸಿದರು. ಜೀವಿತ್ ನಿರೂಪಿಸಿದರು.