
ಸುಳ್ಯ ಪ್ರಾ. ಕೃ. ಪ ಸಹಕಾರ ಸಂಘ ನಿ., ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ‘ ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ‘ ಲೋಕಾರ್ಪಣೆ ಸಮಾರಂಭವು ಏಪ್ರಿಲ್ 12 ರಂದು ನಡೆಯಲಿದೆ.

ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಲೋಕಸಭಾ ಸದಸ್ಯರಾದ ಶ್ರೀ ಕ್ಯಾ. ಬ್ರಿಜೇಶ್ ಚೌಟ ರವರು ನೆರವೇರಿಸಲಿದ್ದಾರೆ. ಸುಳ್ಯ ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷರಾದ ಶ್ರೀ ವಿಕ್ರಮ್ ಎ.ವಿ ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರ ಮಾನ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ರವರು ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರಾದ ಶ್ರೀ ಡಿ.ವಿ ಸದಾನಂದ ಗೌಡ ರವರು ಭದ್ರತಾ ಕೊಠಡಿ ಮತ್ತು ಲಿಫ್ಟ್ ಹಾಗೂ ಮಾಜಿ ಲೋಕಸಭಾ ಸದಸ್ಯರು ಶ್ರೀ ನಳಿನ್ ಕುಮಾರ್ ಕಟೀಲ್ ರವರು ಆಡಳಿತ ಮಂಡಳಿಯ ಸಭಾಭವನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರು ಶ್ರೀ ಎಸ್ ಅಂಗಾರ, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನಿ ಅಧ್ಯಕ್ಷರಾದ ಶ್ರೀ ಶಶಿಕುಮಾರ್ ರೈ ಬಾಲ್ಯೋಟ್ಟು, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ , ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನಿರ್ದೇಶಕರಾದ ಶ್ರೀ ಎಸ್. ಎನ್ ಮನ್ಮಥ, ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ರಮೇಶ್ ಎಚ್. ಎನ್, ನಗರ ಪಂಚಾಯತ್ ಸುಳ್ಯದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಎ. ನೀರಬಿದಿರೆ, ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀ ಎಸ್. ಎಂ. ರಘು,ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೇವಕಿ ವಿಷ್ಣುನಗರ ರವರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2.00 ರಿಂದ ದಿನೇಶ್ ಕೋಡಪದವು ಸಾರಥ್ಯದಲ್ಲಿ, ಧೀರಜ್ ರೈ ಸಂಪಾಜೆ ಭಾಗವತಿಕೆಯಲ್ಲಿ ಜಿಲ್ಲೆಯ ಹಾಸ್ಯ ದಿಗ್ಗಜರ ಸಮ್ಮೇಳನದಲ್ಲಿ ಯಕ್ಷ ತೆಲಿಕೆ ಕಾರ್ಯಕ್ರಮ ನಡೆಯಲಿದೆ.
