
ಸುಳ್ಯ ಪ್ರಾ. ಕೃ. ಪ ಸಹಕಾರ ಸಂಘದ ನೂತನ ಕಟ್ಟಡ ‘ ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ‘ ಲೋಕಾರ್ಪಣೆಗೊಂಡಿತು. ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ, ಸುಳ್ಯ ವಿಧಾನಸಭಾ ಕ್ಷೇತ್ರ ಮಾನ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನಿ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನಿರ್ದೇಶಕರಾದ ಎಸ್. ಎನ್ ಮನ್ಮಥ, ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್, ನಗರ ಪಂಚಾಯತ್ ಸುಳ್ಯದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಎ. ನೀರಬಿದಿರೆ, ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಸ್. ಎಂ. ರಘು,ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೇವಕಿ ವಿಷ್ಣುನಗರ, ಸಹಕಾರಿ ಸಂಘದ ಅಧ್ಯಕ್ಷ ವಿಕ್ರಂ ಎ.ವಿ. ಹಾಗೂ ನಿರ್ದೆಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ ಎಸ್.ಪಿ., ತಾಲೂಕಿನ ಸಹಕಾರಿ ಸಂಘಗಳ ಅಧ್ಯಕ್ಷರು ಉಪಾಧ್ಯಕ್ಷರು, ಸಿಇಓ ಹಾಗೂ ಸಹಕಾರಿಗಳು ಉಪಸ್ಥಿತರಿದ್ದರು.