
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇದರ ಆಶ್ರಯದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆಯು ಬಂಟರ ಭವನ ಕೇರ್ಪಳ ಸುಳ್ಯದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಶಾಸಕರಾದ ಕು.ಭಾಗೀರಥಿ ಮುರುಳ್ಯ ರವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಮಾನ್ಯ ರಾಜ್ಯಸಭಾ ಸದಸ್ಯರಾದ ಡಿ.ವೀರೇಂದ್ರ ಹೆಗ್ಗಡೆ, ವಿಧಾನಪರಿಷತ್ ಮಾನ್ಯ ಶಾಸಕರಾದ ಎಸ್. ಎಲ್.ಭೋಜೇಗೌಡ, ಐವನ್ ಡಿ’ ಸೋಜ, ಕೆ. ಪ್ರತಾಪಸಿಂಹ ನಾಯಕ್, ಮಂಜುನಾಥ ಭಂಡಾರಿ, ಡಾ. ಧನಂಜಯ ಸರ್ಜಿ, ಕಿಶೋರ್ ಬಿ.ಆರ್, ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಎ. ನೀರಬಿದಿರೆ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರನಾಥ ಗಟ್ಟಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಜೋಕಿಂ ಸ್ಟಾಗ್ಲಿ ಅಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಉಮ್ಮರ್ ಯು.ಹೆಚ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶ್ರೀಮತಿ ಮಮತಾ ಡಿ.ಎಸ್. ಗಟ್ಟಿ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಸೋಮಣ್ಣ ಬೇವಿನ ಮರದ, ಕರ್ನಾಟಕ ಮೀನು ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಶ್ರೀಮತಿ ಮಾಲಾ ನಾರಾಯಣ ರಾವ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತರಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಸುಳ್ಯ ಇದರ ಅಧ್ಯಕ್ಷರಾದ ಶಾಹುಲ್ ಹಮೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ. ಮುಸ್ತಾಫ ಹಾಗೂ ಪಟ್ಟಣ ಪಂಚಾಯತ್‌ನ ಉಪಾಧ್ಯಕ್ಷರು, ಸರ್ವ ಸದಸ್ಯರು, ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ತಾಲೂಕಿನ ಪ.ಜಾತಿ/ಪ.ಪಂಗಡದ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದ ಉಪನ್ಯಾಸವನ್ನು ಗೋವಿಂದದಾಸ್ ಕಾಲೇಜು, ಸುರತ್ಕಲ್, ಮಂಗಳೂರಿನ ಸಹಾಯಕ ಪ್ರಾಧ್ಯಾಪಕರಾದ (ರಾಜ್ಯಶಾಸ್ತ್ರ ವಿಭಾಗ) ಡಾ.ಆಶಾಲತಾ ಪಿ. ಯವರು ನೆರವೇರಿಸಲಿದ್ದಾರೆ.