
ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಮಹಿಳಾ ವೇದಿಕೆ ಇದರ ಸಹಕಾರದೊಂದಿಗೆ ಮರಾಟಿ ಯುವ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಮರಾಟಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಎ. 13 ಮತ್ತು 14 ರಂದು ಸುಳ್ಯದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು.
ಪಂದ್ಯಾಟದ ಉದ್ಘಾಟನೆಯನ್ನು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್ ನೆರವೇರಿಸಿದರು.ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ ಅಜ್ಜಾವರ ಸಭಾಧ್ಯಕ್ಷತೆ ವಹಿಸಿದ್ದರು.
ಪಂದ್ಯಾಟದಲ್ಲಿ ಒಟ್ಟು 10 ತಂಡಗಳು ಭಾಗವಹಿಸಿದ್ದವು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾಟದಲ್ಲಿ ಪ್ರಥಮ ಬಹುಮಾನವನ್ನು ಓಂ ಫ್ರೆಂಡ್ಸ್ ದೊಡ್ಡೇರಿ, ದ್ವಿತೀಯ ಬಹುಮಾನವನ್ನು ಬ್ಲಾಕ್ ಟಾಪ್ ಕೂಟೇಲು ಪಡೆದುಕೊಂಡಿತು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ ಕಲ್ಮಡ್ಕ, ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ ಅಜ್ಜಾವರ, ನಗರ ಪಂಚಾಯತ್ ಉಪಾಧ್ಯಕ್ಷ ಜಿ.ಬುದ್ಧ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
