
ಶ್ರೀ ಅಯ್ಯಪ್ಪ ಭಜನಾ ಮಂಡಳಿ ಕೊಲ್ಲಮೊಗ್ರು ಇದರ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ ಹಾಗೂ ಊರಿನವರ ಸಹಕಾರದೊಂದಿಗೆ ಏಳು ದಿನಗಳ ಕಾಲ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ ನಡೆದ “ಮಕ್ಕಳ ಸಂಸ್ಕಾರ ಮತ್ತು ಭಜನಾ ತರಬೇತಿ ಶಿಬಿರ” ದ ಸಮಾರೋಪ ಸಮಾರಂಭವು ಏ.17 ರಂದು ನಡೆಯಿತು.



ತಂಬಿನಡ್ಕ ದಿಂದ ಮಕ್ಕಳ ಕುಣಿತ ಭಜನೆಯೊಂದಿಗೆ ಮೆರವಣಿಗೆ ಪ್ರಾರಂಭಗೊಂಡು ಮಯೂರ ಕಲಾಮಂದಿರಕ್ಕೆ ಸಾಗಿ ಬಂದಿತು.
ಚಂದ್ರಶೇಖರ ಕೊಂದಾಳ ರವರು ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಶ್ರೀ ಅಯ್ಯಪ್ಪ ಭಜನಾ ಮಂಡಳಿಯ ಅಧ್ಯಕ್ಷರಾದ ಹೇಮಂತ್ ದೋಲನಮನೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡ ರವರು ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹಿರಿಯ ಭಜಕರಾದ ಲಕ್ಷ್ಮಿನಾರಾಯಣ.ಎಂ ಬೆಂಡೋಡಿ, ಎ.ಕೆ ಜಯರಾಮ್ ಅಂಬೆಕಲ್ಲು ಹಾಗೂ ಕಳೆದ 29 ವರ್ಷಗಳಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದ ಡಾ| ನಂದಕುಮಾರ್ ಬಾಳಿಕಳ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತೀರ್ಥರಾಮ ದೋಣಿಪಳ್ಳ, ಕಮಲಾಕ್ಷ ಮುಳ್ಳುಬಾಗಿಲು, ಅನಂತರಾಮ ಮಣಿಯಾನಮನೆ ಹಾಗೂ ಹರಿಪ್ರಸಾದ್ ಮಲ್ಲಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
