Ad Widget

ಗ್ರಾ.ಪಂ.ಮಾಜಿ ಸದಸ್ಯ ಸನತ್ ಅಡ್ಕಾರು ನಿಧನ

ಜಾಲ್ಸೂರು ಗ್ರಾಮದ ಅಡ್ಕಾರು ದಿ. ತೇಜಕುಮಾರ್ ರವರ ಪುತ್ರ ಗ್ರಾ.ಪಂ.ಮಾಜಿ ಸದಸ್ಯ ಸನತ್ ಅಡ್ಕಾರು ಅಲ್ಪಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ರು. ಮೃತರು ತಾಯಿ, ಪತ್ನಿ, ಪುತ್ರ, ಸಹೋದರ ಶರತ್ ಅಡ್ಕಾರ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಗುತ್ತಿಗಾರು ಅಮರ ಸಂಜೀವಿನಿ ಒಕ್ಕೂಟಕ್ಕೆ ಜಿಲ್ಲಾಮಟ್ಟದ ಅತ್ಯುತ್ತಮ ಒಕ್ಕೂಟ ಪ್ರಶಸ್ತಿ

ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯ ಆಶ್ರಯದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಹಾಗೂ ಮಾರಾಟ ಮೇಳ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ಶನಿವಾರ ನಡೆಯಿತು. ಜಿಲ್ಲೆಯ ವಿವಿಧ ಸಂಜೀವಿನಿ ಒಕ್ಕೂಟಗಳ ಕಾರ್ಯಚಟುವಟಿಕೆಯನ್ನು ಗುರುತಿಸಿ ಪ್ರಶಸ್ತಿ ಹಾಗೂ ಬಹುಮಾನ ನೀಡಲಾಗಿದ್ದು,...
Ad Widget
error: Content is protected !!