- Monday
- April 21st, 2025

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 22 ಮತ್ತು 23ರಂದು ಶ್ರೀ ದೇವಿಯ ಜಾತ್ರೋತ್ಸವ ಹಾಗೂ ದೈವಗಳ ನೇಮ ಉತ್ಸವ ನಡೆಯಲಿದೆ. ಇದರ ಅಂಗವಾಗಿ ಶ್ರಮದಾನ ನಡೆಯುತ್ತಿದ್ದು, ಎ.20 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಶ್ರಮದಾನ ನಡೆಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಇದರ ಸಹಯೋಗದೊಂದಿಗೆ ರಾಷ್ಟ್ರೀbಯ ಹಬ್ಬ ಆಚರಣೆ ಘಟಕದ ವತಿಯಿಂದ ದಿನಾಂಕ 17/04/25 ರಂದು ಅಂಬೇಡ್ಕರ್ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಅತಿಥಿಗಳು ಅಂಬೇಡ್ಕರ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನುಗೈದರು. ವಿದ್ಯಾರ್ಥಿಗಳು ಅಂಬೇಡ್ಕರ ಹಾಡುಗಳನ್ನು ಗೀತ ಗಾಯನದ ಮೂಲಕ...